ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

19 Dec 2013

ಭಾರತದಲ್ಲಿ ಗೂಗಲ್ ಸರ್ಚ್ 2013: ಮೋದಿ ನಂ.1 ರಾಜಕಾರಣಿ.....!!

ಭಾರತದಲ್ಲಿ ಗೂಗಲ್ ಸರ್ಚ್ 2013: ಮೋದಿ ನಂ.1 ರಾಜಕಾರಣಿ

ಬೆಂಗಳೂರು, ಡಿ.18: ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಮೂಲಕ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ 'ಭಾರತೀಯ ರಾಜಕಾರಣಿ' ಎಂಬ ಹೆಗ್ಗಳಿಕೆಗೆ ಮತೊಮ್ಮೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಗೂಗಲ್ ಬಿಡುಗಡೆ ಮಾಡಿದ Zietgeist 2013ರ ವರದಿಯಲ್ಲಿ ನರೇಂದ್ರ ಮೋದಿ ಅವರ ಬಗ್ಗೆಯೇ ಹೆಚ್ಚು ಜನರು ಗೂಗಲ್ ‌ನಲ್ಲಿ ಸರ್ಚ್ ಮಾಡಿದ್ದಾರೆ ಎಂಬ ಅಂಶವನ್ನು ಹೇಳಲಾಗಿದೆ. 
     ರಾಜಕಾರಣಿಗಳ ವಿಭಾಗದಲ್ಲಿ ಮೋದಿ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇದ್ದಾರೆ. ಜತೆಗೆ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಟಾಪ್ 5 ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ನಂ.6ರಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇದ್ದು, ಇವರ ನಂತರದ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇದ್ದಾರೆ.
    ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ಸುಷ್ಮಾ ಸ್ವರಾಜ್ ನಂತರದ ಸ್ಥಾನಗಳಲ್ಲಿದ್ದಾರೆ.
'ಸುದ್ದಿ (News Events' ವಿಭಾಗದಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂಬ ಸುದ್ದಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟಿದೆ. ಈ ವಿಭಾಗದಲ್ಲಿ ಬ್ಲಾಕ್ ಬರಿ ಮಾರಾಟ 2ನೇ ಸ್ಥಾನಗಳಿಸಿದ್ದು, ರಾಹುಲ್ ದ್ರಾವಿಡ್ ನಿವೃತ್ತಿ ಸುದ್ದಿ 3 ನೇ ಸ್ಥಾನಗಳಿಸಿದೆ. ಟಾಪ್ ಟೆನ್ ಸದ್ದು ಮಾಡಿದ ಸುದ್ದಿಗಳು

 * PM Candidature of Narendra Modi
 * ಬ್ಲಾಕ್ ಬೆರಿ ಸೇಲ್
 * ರಾಹುಲ್ ದ್ರಾವಿಡ್ ನಿವೃತ್ತಿ
 * ಸೈನಾ ನೆಹ್ವಾಲ್
 * ವಿಜಯ್ ಮಲ್ಯ ಕಿಂಗ್ ಫಿಷರ್ ಏರ್ ಲೈನ್ಸ್
 * ಕರ್ನಾಟಕ ಎಲೆಕ್ಷನ್ ಫಲಿತಾಂಶ
 * ಆರುಷಿ ತಲ್ವಾರ್ ಕೇಸ್
 * ಏರ್ ಇಂಡಿಯಾ ಸುದ್ದಿ
 * ಇಂಡಿಯನ್ ಎಕಾನಮಿ
      ಅತೀ ಸುದ್ದಿ ಮಾಡಿರುವ ನರೇಂದ್ರ ಮೋದಿ ಒಬ್ಬ ಪ್ರತಿಭಾವಂತ ರಾಜಕಾರಣಿ ಎಂಬುದು ಸಾಬಿತಾಗಿದೆ ಅವರ ಪ್ರಧಾನಿ ಯಾಗುವ ಕನಸು ನನಸಾಗಲಿ  ಜೈ ನಮೋ ... !!

Share

Twitter Delicious Facebook Digg Stumbleupon Favorites More