ಬಾಳಾಠಾಕ್ರೆ ಅಜ್ಜಾನ್ದು ಬಾಳಾ ಆಯ್ತು

ಮಹಾರಾಷ್ಟ್ರದ ಶಿವಸೇನಾ ಮುಖ್ಯಸ್ಥ ಬಾಳಾಠಾಕ್ರೆಗೆ ನಾವು ಅಂದ್ರೆ ಕನ್ನಡಿಗರು ಬಾಳಾಠಾಕ್ರೆ ಅಂತಾ ಕರೆಯಬೇಕಾ..? ಅಥವಾ ಇನ್ನೇನಾದ್ರು ಕರೆಯಬೇಕಾ ಅರ್ಥಾಆಗ್ತಿಲ್ಲಾ ಛೇ!ಛೇ !ನಾವು ಕನ್ನಡಿಗರು ಆ ಥರಾ ಮಾತಾಡಲ್ಲಾ ಅಂತಾಯಿದ್ದಾರೆ ಕನ್ನಡ ಜನ.ಏಕೆಂದರೆ ಜ್ಞಾನದ ಅರಿವೇ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿಯ ಬಗ್ಗೆ ಏನ್ ಗೊತ್ತುರೀ..

ವಿಧಾನ ಪರಿಷತ್ ಚುನಾವಣೆ: ಸದಾನಂದಗೌಡರಿಗೆ ಭರ್ಜರಿ ಜಯ!!

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಪೂರ್ಣಗೊಂಡು ಭಾರಿ ಪೈಪೋಟಿಯ ನಡುವೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಯಾಗಿದ್ದ ಕರ್ನಾಟಕದ ಮುಖ್ಯಮಂತ್ರಿ ಸದಾನಂದಗೌಡರಿಗೆ ಭರ್ಜರಿ ಜಯ ಲಭಿಸಿದೆ.

ರಾಹುಲ್ ದ್ರಾವಿಡ್ ಗೆ ನಾಯಕನ ಸ್ಥಾನ

ಭಾರತ ಕ್ರಿಕೆಟ್ ಕಂಡ ದಂತಕತೆ ಡಿ ವಾಲ್ ಕರ್ನಾಟಕ ಹೆಮ್ಮೆಯ ಕ್ರಿಕೆಟ್ ಆಟಗಾರ ರಾಹುಲ ಶರದ್ ದ್ರಾವಿಡ್ ಈಗ IPL ನ ರಾಜೆಸ್ತಾನ ರಾಯಲ್ ನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ವಿಶ್ವಕಪ್ ನಲ್ಲಿ ಮ್ಯಾಚ್ ಪಿಕ್ಸಿಂಗ್ !!...ವಿನೋದ್ ಕಾಂಬಳೆ.

1996 ರಲ್ಲಿ ಕೊಲ್ಕತ್ತಾದ ಈಡ್ದನ್ ಗಾರ್ಡನ್ ನಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ದದ ಕ್ರಿಕೆಟ್ ವಿಶ್ವಕಪ್ ಸೆಮಿಪೈನಲ್ ಮ್ಯಾಚ್ ನಲ್ಲಿ ಪಿಕ್ಸಿಂಗ್ ಆಗಿತ್ತು ಎಂದು ಮಾಜಿ ಕ್ರಿಕೆಟರ್ ವಿನೋದ್ ಕಾಂಬಳೆ ಖಾಸಗಿ ಟಿವಿ ಚಾನಲ್ಲೊಂದರಲ್ಲಿ ಹೇಳಿದ್ದೂ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ ಅಂದಿನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಜರುದ್ದೀನ್ ಟಾಸ್ ಗೆದ್ದಿದ್ದರು

ಬಳ್ಳಾರಿಯ ಪೈಟಿಂಗ್ ನಲ್ಲಿ ರಾಮುಲುಗೆ ಜಯ

ಬಳ್ಳಾರಿಯ ಗಡಿನಾಡಿನ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲೂ ಬಾರಿ ಮುನ್ನಡೆಯಿಂದ ಗೆಲವು ತಮ್ಮದಾಗಿಸಿಕೊಂಡಿದ್ದಾರೆ.

16 Aug 2011

ತೆeರದಾಳದಲ್ಲಿ ಶ್ರೀ ಪ್ರಭು ದೇವರ ಜಾತ್ರೆ

ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಅಲ್ಲಮ ಪ್ರಭುಬುದೇವರ ಜಾತ್ರೆಯು ತೆರದಾಳದಲ್ಲಿ ದಿ : ೨೯-೦೮-೨೦೧೧ ರಂದು ಜರುಗಲಿದೆ. ಜಾತ್ರೆಯ ನಿಮಿತ್ಯ ದೇವಸ್ಥಾನದಲ್ಲಿ ಅನ್ನ ಪ್ರಸಾದವಿದ್ದು, ಭಕ್ತರು ಪ್ರಸಾದ ಸ್ವಿeಕರಿಸಿ ದೇವರ ದರ್ಶನ ಪಡೆಯುತ್ತಾರೆ. ಹಾಗು ೩೦-೦೮-೨೦೧೧ರಂದು ಮಧ್ಯಾನ ೦೩:೦೦ ಗಂಟೆಗೆ ಕುಸ್ತಿ ಪಂದ್ಯಾವಳಿ ಜರುಗಲಿದೆ. ಪ್ರಶಸ್ತಿಗಾಗಿ ಪೈಪೋಟಿ ನಡೆಯಲಿದೆ. ಪಂದ್ಯಾವಳಿ ನೋಡಲು ಸಾವಿರಾರು ಕುಸ್ತಿ ಪ್ರೇಮಿಗಳು ಪಾಲ್ಗೊಳ್ಳುತ್ತಾರೆ.
ಪ್ರಭುವಿನ ಜೀವನ ಚರಿತ್ರೆ: ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದೊಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲ‍ಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ ಇದೆ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'.ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ.ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ.ಅವನದು ಬಹುಮಟ್ಟಿಗೆ ರೂಪಕ ಭಾಷೆ.ಈ ಭಾಷೆ ಅವನ ವೈಶಿಷ್ಟ್ಯವೂ ಹೌದು.

Share

Twitter Delicious Facebook Digg Stumbleupon Favorites More